Zika Virus | ಝಿಕಾ ವೈರಸ್ ಸೋಂಕು, ಲಕ್ಷಣಗಳೇನು, ವಹಿಸಬೇಕಾದ ಎಚ್ಚರಿಕೆಗಳೇನು? ಪತ್ತೆ ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ZIKA VIRUS

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಝಿಕಾ ಎಂಬುದು ಒಂದು ವೈರಸ್ ಸೋಂಕು (Virus Infection). ಡೆಂಗೆ (Dengue), ಚಿಕೂನ್‍ಗುನ್ಯ (chikungunya) ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ (Zika Virus) ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ತಿಳಿದ್ದಾರೆ.

READ | ದೇಶದಲ್ಲಿ ಶೇ.56-60ರಷ್ಟು ತಾಯಂದಿರಲ್ಲಿ ರಕ್ತಹೀನತೆ! ಆರೋಗ್ಯ ಇಲಾಖೆಯಿಂದ ಖಡಕ್ ವಾರ್ನಿಂಗ್

ಝಿಕಾ ವೈರಸ್ ಸೋಂಕಿನ ಲಕ್ಷಣಗಳೇನು?
ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.
ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ(ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು.

Health tips

ಝಿಕಾ ಭಯಬೇಡ, ಎಚ್ಚರವಿರಲಿ
ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಝಿಕಾ ವೈರಸ್ ಪ್ರಕರಣಗಳು ವರದಿಯಾಗಿರುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ. ಆದರೆ ಜಾಗೃತರಾಗಿರಬೇಕು. ಈ ಕಾಯಿಲೆಯು ಡೆಂಗೆ ಹರಡುವ ಈಡೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಝಿಕಾ ರೋಗ ಲಕ್ಷಣಗಳಾದ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಕಂಡುಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಮತ್ತು ಚಿಕಿತ್ಸೆ ಪಡೆಯಬೇಕು.
ಡಾ.ಗುಡದಪ್ಪ ಕಸಬಿ, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಝಿಕಾ ವೈರಸ್ ಪತ್ತೆ ಹಚ್ಚುವ ವಿಧಾನ

  • ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.
  • ಝಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮ
  • ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ.
  • ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು.
  • ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು.
  • ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.
  • ಝಿಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.
DC Selvamani
Shivamogga DC Dr.R.Selvamani

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ.
ಡಾ.ಆರ್.ಸೆಲ್ವಮಣಿ, ಜಿಲ್ಲಾಧಿಕಾರಿ

ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು
ಮುಂಜಾಗ್ರತಾ ಕ್ರಮ

  1. ಸ್ವಚ್ಛ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು.
  2. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು.
  3. ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.
  4. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು.
  5. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು.

VIDEO REPORT | ನಾನ್ಯಾರೂ ಗೊತ್ತಾಯ್ತೇನಮ್ಮ? ಜನ ನಂಗೆ ಚನ್ನಿ ಅಂತಾರೆ. ನಾನು ಈ ಊರ ಎಂ.ಎಲ್.ಎ ↓

error: Content is protected !!