ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಈ ಹಿಂದೆ ಮಧು ಬಂಗಾರಪ್ಪ (Machu Bangarappa) ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ ಯಾರಿದ್ದಾರೋ ಗೊತ್ತಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಸಮಾಧಾನ ಹೊರಹಾಕಿದರು.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಗೆ ನನಗೆ ಆಹ್ವಾನ ಬಂದಿಲ್ಲ. ನನಗೆ ಯಾರ ಬಗ್ಗೆಯೂ ಭಯವಿಲ್ಲ. ಹೆದರಲು ನಾನೇನು ಕುಮಾರ ಬಂಗಾರಪ್ಪ ಅಲ್ಲ” ಎಂದರು.
ನಾನೂ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿ
ಟಿಕೆಟ್ ಕೇಳುವ ಹಕ್ಕು ಎಲ್ಲರಿಗೂ ಇದೆ. ನಾನೂ ಒಬ್ಬ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿಯ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೂ ತರಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಗೀತಾ ಶಿವರಾಜ್ ಕುಮಾರ್, ಇಸ್ಮಾಯಿಲ್ ಖಾನ್ ಹೀಗೆ ಹಲವರು ಆಕಾಂಕ್ಷಿಗಳಿದ್ದಾರೆ ಎಂದು ಹೇಳಿದರು.
Book My HSRP | ಎಚ್.ಎಸ್.ಆರ್.ಪಿಗೆ ಅರ್ಜಿ ಸಲ್ಲಿಕೆ ಹೇಗೆ, ಏನಿದು ಅತಿ ಸುರಕ್ಷಿತ ನೋಂದಣಿ ಫಲಕ? ಇಲ್ಲಿದೆ ವಿವರ