ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮೆಸ್ಕಾಂ ವ್ಯಾಪ್ತಿಯಲ್ಲಿ ನ.24ರಿಂದ 26ರ ವರೆಗೆ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ (MESCOM) ಪ್ರಕಟಣೆ ತಿಳಿಸಿದೆ.
ಮೆಸ್ಕಾಂ ವ್ಯಾಪ್ತಿಯ ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ, ಚಿಕ್ಕಮಗಳೂರು, ಕಡೂರು, ತರೀಕೆರೆ ನಗರ, ಮಂಗಳೂರು, ಪುತ್ತೂರು, ಬಂಟ್ವಾಳ, ಉಡುಪಿ ಹಾಗೂ ಪಟ್ಟಣದ ವ್ಯಾಪ್ತಿಯಲ್ಲಿ ಮೂರು ದಿನ ಆನ್ ಲೈನ್ ಆಧಾರಿತ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.
READ | ಎಚ್ಎಸ್ಆರ್.ಪಿ ಗಡುವು ವಿಸ್ತರಣೆ, ಕೊನೆಯ ದಿನಾಂಕ ಯಾವುದು? ಇದುವರೆಗೆ ಎಷ್ಟು ಜನ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದಾರೆ?
ಆನ್ ಲೈನ್ ಸೇವೆ ಸ್ಥಗಿತಕ್ಕೆ ಕಾರಣವೇನು?
ಮಾಹಿತಿ ತಂತ್ರಜ್ಞಾನ ಸೇವೆಗೆ ಸಂಬಂಧಿಸಿದಂತೆ ತಂತ್ರಾಂಶ ಹಾಗೂ ಹಾರ್ಡ್ ವೇರ್ ಉನ್ನತಣಿಕರಿಸಲಾಗುತ್ತಿದೆ. ಹಾಗಾಗಿ ಆನ್ ಲೈನ್ ಸೇವೆಗಳು ಸ್ಥಗಿತಗೊಳ್ಳಲಿವೆ.
ಏನೆಲ್ಲ ಸೇವೆಗಳು ಸ್ಥಗಿತ?
ಆನ್ ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು, ಲೋಡ್ ಬದಲಾವಣೆ, ನಗದು ಪಾವತಿ, ಆನ್ ಲೈನ್ ಮೂಲಕ ಬಿಲ್ ಪಾವತಿ ಇತ್ಯಾದಿ ಸೇವೆಗಳು ಗ್ರಾಹರಿಕರಿಗೆ ಲಭ್ಯವಾಗುವುದಿಲ್ಲ. ಈ ಅವಧಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ತಿಳಿಸಲಾಗಿದೆ.