Death | ಮೆಗ್ಗಾನ್ ಆಸ್ಪತ್ರೆಯಲ್ಲಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Meggan Hospital

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಪಕ್ಕದಲ್ಲಿ ಬಿದ್ದು ಗಾಯಗೊಂಡಿದ್ದ ಸುಮಾರು 50 ರಿಂದ 55 ವರ್ಷದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟ್ಡಿರುವುದಾಗಿ ತಿಳಿಸಿರುತ್ತಾರೆ. ಮೃತದೇಹವು ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿರುತ್ತದೆ.
ಅಪರಿಚಿತ ಮಹಿಳೆಯು ಸುಮಾರು 5.8 ಅಡಿ ಎತ್ತರ, ಕಪ್ಪು ಮೈ ಬಣ್ಣ, ದುಂಡು ಮುಖ ಹಾಗೂ 10 ಇಂಚು ಉದ್ದದ ಕಪ್ಪು ಕೂದಲು ಇದ್ದು, ದೃಢವಾದದ ಮೈಕಟ್ಟನ್ನು ಹೊಂದಿರುತ್ತಾರೆ. ಮೃತರ ವಾರಸುದಾರರು ಯಾರಾದರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣಾ ದೂ.ಸಂ : 08182-261414, 9611761255 ನ್ನು ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೊಲೀಸ್ ಠಾಣೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ

error: Content is protected !!