ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಇಬ್ಬರಿಗೆ ಕರೊನಾ ಸೋಂಕು (corona positive) ತಗುಲಿದ್ದು, ಸೋಂಕಿತರ (corona active cases) ಸಂಖ್ಯೆಯು ಏಳಕ್ಕೆ ಏರಿಕೆಯಾಗಿದೆ.
READ | ಶಿವಮೊಗ್ಗದಲ್ಲಿ ಕೋವಿಡ್ ಹೈ ಅಲರ್ಟ್, ಏನೆಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ?
ಶಿವಮೊಗ್ಗ ತಾಲೂಕು ಹಾಗೂ ಹೊರ ಜಿಲ್ಲೆಯಿಂದ ಬಂದವರಿಗೆ ಕರೊನಾ ಸೋಂಕು (corona infection) ತಗುಲಿರುವುದು ದೃಢಪಟ್ಟಿದೆ. ಇವರ ಆರೋಗ್ಯ ಸ್ಥಿರವಾಗಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಕಾಯಿಲೆಯ ಲಕ್ಷಣಗಳು ಹೊಂದಿರುವ 54 ಜನರನ್ನು ತಪಾಸಣೆಗೆ ಒಳಪಡಿಸಿದ್ದು ಅದರಲ್ಲಿ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ.