Kannada Flex | ವಾಣಿಜ್ಯ ಮಳಿಗೆ ಫಲಕಗಳ ಮೇಲೆ ಶೇ.60ರಷ್ಟು ಕನ್ನಡ ಕಡ್ಡಾಯ, ಸಂಪುಟದಲ್ಲಿ ಮಹತ್ವದ ನಿರ್ಧಾರ

Kannada asmite

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇನ್ಮುಂದೆ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಈ ನಿಟ್ಟಿನಲ್ಲಿ ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವೊಂದು ಕೈಗೊಂಡಿದ್ದು, ಅದರಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಇರುವುದು ಕಡ್ಡಾಯ.

Kannada

ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿ ರಾಜಕೀಯ ಬದುಕು ಆರಂಭಿಸಿದ ನನಗೆ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತವೇ ಮೊದಲ ಆದ್ಯತೆ. ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ.
ಸಿದ್ದರಾಮಯ್ಯ, ಮುಖ್ಯಮಂತ್ರಿ

ಕರುನಾಡಿನಲ್ಲಿಯೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರೆಲ್ಲರೂ ಹೆಚ್ಚೆಚ್ಚು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬ ಹೆಬ್ಬಯಕೆಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಉದ್ದೇಶದಿಂದ ರಾಜ್ಯದಾದ್ಯಂತ ಎಲ್ಲ ವಾಣಿಜ್ಯ ಮಳಿಗೆಗಳು ಹಾಗೂ ಕೈಗಾರಿಕೋದ್ಯಮಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

READ | ಸಿಗಂದೂರು ಜಾತ್ರೆಗೆ ಡೇಟ್ ಫಿಕ್ಸ್, ಯಾವ ದಿನ ಏನೆಲ್ಲ ಕಾರ್ಯಕ್ರಮ?

error: Content is protected !!