Constables Exam | ಕಾನ್ಸ್‌ಟೇಬಲ್ ಹುದ್ದೆಗೆ ನಡೆಯಲಿದೆ ಪರೀಕ್ಷೆ

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್(ಸಿಎಆರ್ ಮತ್ತು ಡಿಎಆರ್-ಪುರುಷ ಮತ್ತು ತೃತೀಯ ಲಿಂಗ ಪುರುಷ) 3,064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನ.28ರಂದು ಬೆಳಗ್ಗೆ 11 ರಿಂದ 12.30 ಗಂಟೆವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.
ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‍ನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ

error: Content is protected !!