Job fair | ಜ.30ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಪ್ರತಿಷ್ಠಿತ ಕಂಪೆನಿಗಳು ಭಾಗಿ, ಯಾರಿಗೆಲ್ಲ ಅವಕಾಶ?

JOB INTERVIEW

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ ಪಿಯುಸಿ/ ಐಟಿಐ/ ಡಿಪ್ಲೊಮಾ/ ಬಿಇ ಮತ್ತು ಪದವಿ/ ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/ 9482023412 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!