ನಾಳೆ ಮಾಂಸ ಮಾರಾಟ ಇರಲ್ಲ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ ಜನವರಿ 14ರಂದು ನಗರ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಆದೇಶಿಸಿದ್ದಾರೆ.
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು 14ರಂದು ಸ್ಥಗಿತಗೊಳಿಸಬೇಕು. ಒಂದುವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡಿದ್ದಲ್ಲಿ ಅಂಗಡಿಗಳ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!