ಎಂಆರ್‍ಎಸ್ ಸರ್ಕಲ್‍ನಲ್ಲಿ ಅಪಘಾತ, ಐವರು ಬಚಾವ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಎಂ.ಆರ್.ಎಸ್. ಸರ್ಕಲ್ ನಲ್ಲಿ ಗುರುವಾರ ಅಪಘಾತ ಸಂಭವಿಸಿದ್ದು, ಯಾವುದೇ ಜೀವಹಾನಿ ಆಗಿಲ್ಲ.
ಕಾರು ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಗಾಜು ಪುಡಿಯಾಗಿದ್ದು, ರಸ್ತೆಯಿಡೀ ಚೆಲ್ಲಾಪಿಲ್ಲಿಯಾಗಿದ್ದವು. ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು. ಯಾರಿಗೂ ಜೀವಹಾನಿಯಾಗಿಲ್ಲ.

ಬಸ್ ಶಿವಮೊಗ್ಗದಿಂದ ಮೈಸೂರಿಗೆ ತೆರಳುತಿತ್ತು. ಅದೇ ವೇಳೆ ಸಾಗರದ ಕಡೆಗೆ ಹೋಗುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!