Exam time table | ಎಸ್‌ಎಸ್‌ಎಲ್‌ಸಿ, ಪಿಯುಸಿ ವೇಳಾಪಟ್ಟಿ ದಿನಾಂಕ‌ ನಿಗದಿ, ಯಾವ ದಿನ ಯಾವ ಪರೀಕ್ಷೆ ನಡೆಯಲಿದೆ?

 

 

ಸುದ್ದಿ ಕಣಜ.ಕಾಂ ಬೆಂಗಳೂರು
BENGALURU: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ (SSLC AND PUC Time table) ಪರೀಕ್ಷೆಗಳ ದಿನಾಂಕ ಪ್ರಕಟವಾಗಿದ್ದು, ಈ ಕೆಳಗಿನ ದಿನಾಂಕದಂತೆ ಪರೀಕ್ಷೆಗಳು ನಡೆಯಲಿವೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಎಸ್‌. ಮಧು ಬಂಗಾರಪ್ಪ (Education minister S Madhu Bangarappa) ಅವರು ಮಾಹಿತಿ ನೀಡಿದ್ದು, ಮಾರ್ಚ್ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್​​ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

Madhu Bangarappa
ಮಧು ಬಂಗಾರಪ್ಪ

ಅಲ್ಲದೆ, ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.
ಎಲ್ಲ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರು ಪರೀಕ್ಷೆಗೆ ಹಾಜರಾಗಬೇಕು. ಮೂರು ಪರೀಕ್ಷೆಯಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ‌ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

READ | ಮಕ್ಕಳಿಲ್ಲವೇ? ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ

ಎಸ್​ಎಸ್ಎಲ್ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10.15ಕ್ಕೆ ಆರಂಭಗೊಂಡು ಮಧ್ಯಾಹ್ನ 1.30ಕ್ಕೆ ಮುಕ್ತಾಯಗೊಳ್ಳಲಿದೆ.

ಎಸ್​ಎಸ್ಎಲ್​ಸಿ ವೇಳಾಪಟ್ಟಿ​

  • 25-03-2024 
    ಸೋಮವಾರ ಪ್ರಥಮ ಭಾಷೆ ಪರೀಕ್ಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಇಂಗ್ಲಿಷ್‌ (NCERT), ಸಂಸ್ಕೃತ
  • 27-03-2024
    ಸಮಾಜ ವಿಜ್ಞಾನ
  • 30-03-3034
    ವಿಜ್ಞಾನ, ರಾಜ್ಯಶಾಸ್ತ್ರ 
  • 02-04-2024
    ಗಣಿತ, ಸಮಾಜ ಶಾಸ್ತ್ರ
  • 03-04-2024
    ಅರ್ಥಶಾಸ್ತ್ರ
  • 04-04-2024
    ತೃತೀಯ ಭಾಷೆ ಹಿಂದಿ (NCERT), ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
  • 06-04-2024
    ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ

ಪಿಯುಸಿ ಪರೀಕ್ಷಾ ವೇಳಾಪಟ್ಟಿ

  • 01-03-2024
    ಕನ್ನಡ, ಅರೆಬಿಕ್‌ 
  • 04-03-2024
    ಗಣಿತ, ಶಿಕ್ಷಣಶಾಸ್ತ್ರ
  • 05-03-2024
    ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ 
  • 06-03-2024
    ಮಾಹಿತಿ ತಂತ್ರಜ್ಞಾನ, ರಿಟೈಲ್‌, ಆಟೋ ಮೊಬೈಲ್‌, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್
  • 07-03-2024 
    ಇತಿಹಾಸ, ಭೌತಶಾಸ್ತ್ರ 
  • 09-03-2024 
    ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
  • 11-03-2024
    ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • 13-03-2024 
    ಇಂಗ್ಲಿಷ್‌ 
  • 15-03-2024
    ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ ಮೂಲಗಣಿತ 
  • 16-03-2024 
    ಅರ್ಥಶಾಸ್ತ್ರ 
  • 18-03-2024
    ಭೂಗೋಳ ಶಾಸ್ತ್ರ, ಜೀವಶಾಸ್ತ್ರ 
  • 20-03-2024
    ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
  • 21-03-2024
    ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
  • 22-03-2024 
    ಹಿಂದಿ

Click here for SSLC Time table

Click here for PUC Time table

error: Content is protected !!