Maha Shivaratri | ಶಿವಮಂದಿರದಲ್ಲಿ ಬಂದ ಭಕ್ತರೋ ಭಕ್ತರು, ಬಡಾವಣೆಗಳಲ್ಲೂ ಪೂಜೆ, ದರ್ಶನಕ್ಕೆ ಬರುತ್ತಿರುವ ಜನಸಾಗರ, ಎಲ್ಲಿ ಹೇಗಿತ್ತು ಪೂಜೆ?

Shivaratri Vinobnagar shivalaya

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಾದ್ಯಂತ ಶಿವಮಂದಿರಗಳಲ್ಲಿ ಭಕ್ತರೋ ಭಕ್ತರು. ಬಿಸಿಲನ್ನೂ ಲೆಕ್ಕಿಸದೇ ಜನರು ದೇವರ ದರ್ಶನ ಪಡೆದರು. ಪ್ರತಿ ಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.
ಶಿವನ ದೇವಸ್ಥಾನಗಳನ್ನು ಬಣ್ಣದ ದೀಪ ಮತ್ತು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ನಡೆದವು. ಭಕ್ತರು ದೇವರ ದರ್ಶನ ಪಡೆದು ಪುನಿತರಾದರು.

READ | ಶಿವರಾತ್ರಿಯಂದೇ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್, ಶಿವಮೊಗ್ಗ ಸೇರಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಇಲ್ಲಿದೆ

ಹರಕೆರೆ ದೇವಸ್ಥಾನದಲ್ಲಿ ಜನಸಾಗರ

Harakere Shiva temple
ಹರಕೆರೆಯಲ್ಲಿರುವ ಶಿವನ ದೇವಸ್ಥಾನದಲ್ಲಿ ಶಿವನಿಗೆ ಅಭಿಷೇಕ ಮಾಡಲಾಯಿತು. ಬಿಲ್ವ ಪತ್ರೆ, ತುಂಬೆ ಅರ್ಪಣೆ, ಮಹಾಮಂಗಳಾರತಿ ಮಾಡಲಾಯಿತು. ಭಕ್ತರಿಗೆ ವಿಶೇಷ ದರ್ಶನದ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ಭಕ್ತರು ತುಂಗಾ ನದಿಯಲ್ಲಿ ಸ್ನಾನ ಮಾಡಿ ನಂತರ ಶಿವನ ದರ್ಶನ ಪಡೆದರು. ಈ ದೇವಸ್ಥಾನವು ಇತಿಹಾಸ ಪ್ರಸಿದ್ಧವಾಗಿದೆ.
ಸುಡುವ ಬಿಸಿಲಿದ್ದರೂ ಅದ್ಯಾವುದನ್ನೂ ಲೆಕ್ಕಿಸದೇ ಜನರು ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದರು.
ವಿನೋಬನಗರ ಶಿವಾಲಯ
ವಿನೋಬನಗರ ಶಿವಾಲಯದಲ್ಲಿಯೂ ಬೆಳಗ್ಗೆಯಿಂದಲೇ ಜನರು ಸೇರಿದ್ದರು. ಭಕ್ತರು ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದರು. ಶಾಮೀಯಾನ ಹಾಕಿ ಜನರು ನಿಲ್ಲುವುದಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ಪ್ರಸಾದ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು.
ಈಶ್ವರವನದಲ್ಲಿ ಶಿವರಾತ್ರಿ
ಅಬ್ಬಲಗೆರೆ ಬಳಿಯ ಈಶ್ವರವನದಲ್ಲಿ ಶಿವರಾತ್ರಿ ಆಚರಣೆ ಮಾಡಲಾಯಿತು. ರುದ್ರಾಭಿಷೇಕ, ಭಜನೆ, ಪ್ರವಚನ, ಶಿವಸ್ತುತಿ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಗೀತ ಕಾರ್ಯಕ್ರಮ ನಡೆಯಿತು.
ಇನ್ನೆಲ್ಲೆಲ್ಲಿ ಏನೇನು ವಿಶೇಷ?

  • ಕೋಟೆ ಭೀಮೇಶ್ವರ ದೇವಾಲಯದಲ್ಲಿ ವಿಶೇಷವಾಗಿ ಶಿವನ ಪೂಜೆ ನಡೆಯಿತು. ಬೆಳಿಗ್ಗೆಯಿಂದಲೇ ಭಕ್ತರು ನೂರಾರು ಸಂಖ್ಯೆಯಲ್ಲಿ ಸೇರಿ ಈಶ್ವರನ ದರ್ಶನ ಪಡೆದು ಪುನೀತರಾದರು. ನದಿಯ ದಂಡೆಯ ಮೇಲೆ ಈಶ್ವರ ದೇವಾಲಯ ಇರುವುದು ಇಲ್ಲಿನ ವಿಶೇಷವಾಗಿದೆ.
  • ವೀರಶೈವ ಕಲ್ಯಾಣ ಮಂದಿರದ ಶಿವನ ದೇವಾಲಯ, ಜೈಲ್ ಆವರಣದಲ್ಲಿರುವ ಉಮಾ ಮಹೇಶ್ವರ, ಬಸವನಗುಡಿಯ ಈಶ್ವರ ದೇವಾಲಯ, ರವೀಂದ್ರ ನಗರದ ಶಿವನ ಮೂರ್ತಿ, ತುಂಗಾ ತೀರದ ಅರಕೇಶ್ವರ ದೇವಾಲಯ, ಗಾಂಧಿ ಬಜಾರಿನ ಬಸವೇಶ್ವರ ದೇವಾಲಯ, ಮಲವಗೊಪ್ಪದ ಚನ್ನಬಸವೇಶ್ವರ, ಶರಾವತಿ ನಗರದ ಕಾಲಭೈರವೇಶ್ವರ ದೇವಾಲಯ, ಬಿ.ಎಚï.ರಸ್ತೆಯ ಮೈಲಾರೇಶ್ವರ, ರವೀಂದ್ರನಗರ ಶಿವ ಪಾರ್ಕ್, ಬಿ.ಬಿ.ರಸ್ತೆಯ ಭವಾನಿ ಶಂಕರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕಾರ್ಯಗಳು, ಭಜನೆ ಆಯೋಜಿಸಲಾಗಿತ್ತು. ಜಾಗರಣೆ ಅಂಗವಾಗಿದೇವಾಲಯ ಗಳಲ್ಲಿಭಕ್ತಿಗೀತೆ ಸೇರಿವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

error: Content is protected !!