BY Raghavendra | ಬಿ.ವೈ.ರಾಘವೇಂದ್ರ ಮನೆ ಮುಂದೆ ಹರ್ಷ, ಪಟಾಕಿಯ ಸದ್ದು, ಕುಣಿದು ಕುಪ್ಪಳಿಸಿದ ಅಭಿಮಾನಿಗಳು, ರಾಘವೇಂದ್ರರ ಫಸ್ಟ್ ರಿಯಾಕ್ಷನ್ ಏನು?

BY Raghavendra

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದ್ದು, ಮನೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹರ್ಷೋದ್ಗಾರದಿಂದ ರಾಘವೇಂದ್ರ ಅವರನ್ನು ಎತ್ತಿಕೊಂಡು ಕುಣಿದಾಡಿದರು. ಪಟಾಕಿ ಸಿಡಿಸಿ ಸಿಹಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಯಿತು.

VIDEO REPORT 

 

READ | ಟಿಕೆಟ್ ಘೋಷಣೆ ಬೆನ್ನಲ್ಲೇ ಈಶ್ವರಪ್ಪ ತುರ್ತು ಮಾಧ್ಯಮಗೋಷ್ಠಿ, ಯಡಿಯೂರಪ್ಪ ವಿರುದ್ಧ ಮಾಡಿದ 5 ನೇರ ಆರೋಪಗಳೇನು?

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಘವೇಂದ್ರ, ನನ್ನ ಮೇಲೆ ಅಪಾರವಾದ ನಂಬಿಕೆ ಇಟ್ಟು ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರ ಮಟ್ಟದ ಮತ್ತು ರಾಜ್ಯ ಮಟ್ಟದ ಎಲ್ಲ ಹಿರಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

error: Content is protected !!