ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಅವರು ಜನವರಿ 20ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಕಾರ್ಯಕ್ರಮಗಳೇನು
- ನಗರದ ದುರ್ಗಿಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ವೀಕ್ಷಣೆ, ಸಂವಾದ ಯೋಗ ಕಾರ್ಯಕ್ರಮದಲ್ಲಿ ಭಾಗಿ
- ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಶಾಲಾಭಿವೃದ್ಧಿ ವೀಕ್ಷಣೆ
- ಬೆಳಗ್ಗೆ 11.30 ಗಂಟೆಗೆ ಬಿ.ಬಿ. ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲಾಭಿವೃದ್ಧಿ ವೀಕ್ಷಣೆ
- ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ ಸ್ಮಾರ್ಟ್ ಎಜುಕೇಷನ್ ಯೋಜನೆ ಹಾಗೂ 87 ದುರಸ್ತಿಗೊಂಡ ಸರ್ಕಾರಿ ಶಾಲೆಗಳ ಉದ್ಘಾಟನೆ
- ಮಧ್ಯಾಹ್ನ 1 ಗಂಟೆಗೆ ಪ್ರೌಢ ಶಾಲೆ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರುಗಳು ಮತ್ತು ನಗರ ಶಾಲೆಗಳ ಅಭಿವೃದ್ಧಿ ಕುರಿತು ಪೋಷಕರೊಂದಿಗೆ ಸಂವಾದ
- ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗಕ್ಕೆ ತೆರಳುವರು