3 ತಿಂಗಳಲ್ಲಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಟಾಯ್ಲೆಟ್

 

 

ks eshwarappaಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಹಲವು ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆ ಇದೆ. ಶೌಚಾಲಯಗಳಿಲ್ಲ. ಅದಕ್ಕಾಗಿ, ಯಾವ ಶಾಲೆಗಳಲ್ಲಿ ಸೌಲಭ್ಯಗಳಿಲ್ಲವೋ ಅದರ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಇನ್ನೂ ಮೂರು ತಿಂಗಳಲ್ಲಿ ಎಲ್ಲ ಶಾಲೆಗಳಿಗೆ ಟಾಯ್ಲೆಟ್ ನಿರ್ಮಾಣ ಸೇರಿ ಇನ್ನಿತರ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಶಿಕ್ಷಣ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಕರು ಶೌಚಾಲಯ ರಹಿತ ಶಾಲೆಗಳ ಮಾಹಿತಿ ಕೂಡಲೇ ನೀಡುವಂತೆ ನಿರ್ದೇಶನ ನೀಡಿದರು.

error: Content is protected !!