Lightning | ಶಿವಮೊಗ್ಗದಲ್ಲಿ ಸಿಡಿಲು ಬಡಿದು ರೈತ ಸಾವು, ಇನ್ನೊಬ್ಬನಿಗೆ ಗಾಯ

Breaking news1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ರೈತನೊಬ್ಬ ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದು, ಜೊತೆಯಲ್ಲಿದ್ದವನ ಕಾಲಿಗೆ ಗಾಯವಾಗಿದೆ.

READ | ಶಿವಮೊಗ್ಗದಲ್ಲಿ ಮಳೆ ಆರ್ಭಟಕ್ಕೆ ಒಂದು ಬಲಿ, ಎಲ್ಲೆಲ್ಲಿ ಏನೇನು ಅನಾಹುತ ಆಗಿದೆ?

ಶುಕ್ರವಾರ ಸಂಜೆ ಜಮೀನಿನಲ್ಲಿ ಕೆಲಸಕ್ಕೆ ಹೋದಾಗ ಸಿಡಿಲು ಬಡಿದು ಹರಮಘಟ್ಟ ಗ್ರಾಮದ ನಿವಾಸಿ ರೈತ ರಾಕೇಶ್ (30) ಮೃತಪಟ್ಟಿದ್ದಾನೆ. ರುದ್ರೇಶ್ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯವಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!