Eviction | ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಆದೇಶದಲ್ಲಿ ಏನಿದೆ?

KS Eshwarappa

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿ‌ ಅಧ್ಯಕ್ಷ ಲಿಂಗರಾಜ್ ಪಾಟೀಲ್‌ ಅವರು ಪಕ್ಷದಿಂದ ಉಚ್ಛಾಟಿಸಿ ಆದೇಶಿಸಿದ್ದಾರೆ.
ಆದೇಶದಲ್ಲಿ‌ ಏನಿದೆ?
“ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ತಿಳಿಸಿದ್ದಾರೆ.

READ | ಚುನಾವಣಾ ಆಯೋಗಕ್ಕೆ ಪತ್ರ ಬರೀತಾರಂತೆ ಕೆ.ಎಸ್.ಈಶ್ವರಪ್ಪ, ಕಾರಣವೇನು?

error: Content is protected !!