Shimoga news | ನೈರುತ್ಯ ಕ್ಷೇತ್ರದ ಚುನಾವಣೆ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕೊನೆ ದಿನ ಯಾವಾಗ?

Voter ID

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ 2024ರ ಸಂಬಂಧ ಚುನಾವಣಾ ವೇಳಾಪಟ್ಟಿ ಪ್ರಕಟಣೆ ರೀತ್ಯಾ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಮೇ 6 ಕಡೆಯ ದಿನವಾಗಿರುತ್ತದೆ ಎಂದು ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಬಿ.ಎನ್.ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ

SHIMOGA: 2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಎಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಗದಗ-ಬೆಟಗೇರಿ- 22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ- 17 ಅಭ್ಯರ್ಥಿಗಳು, ಆಂಧ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ- 3 ಅಭ್ಯರ್ಥಿಗಳು ಹಾಗೂ ಕೇರಳದ ಕಣ್ಣೂರು- 2 ಅಭ್ಯರ್ಥಿಗಳಿಗೆ ಅವಕಾಶವಿದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ ಕರೆಯಲಾಗುವುದು. ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 2,500 ರೂ. ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

READ | ಪೆಟ್ರೋಲ್ ಟ್ಯಾಂಕ್ ಪಲ್ಟಿ, ಆತಂಕ ಸೃಷ್ಟಿ, ಮುಂದೇನಾಯ್ತು?

ಆಸಕ್ತರು ನಿಗದಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ 08372-297221, ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ -08182-223405 ನ್ನು ಸಂಪರ್ಕಿಸುವುದು. ಆನ್ ಲೈನ್ https://khtigadag.ac.in/AdmissionForm.pdf ರಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಮೇ 31ರೊಳಗಾಗಿ ಪ್ರಾಂಶುಪಾಲರು, ಕ.ಕೈ.ತಂ.ಸಂ. ನರಸಾಪುರ, ಗದಗ-ಬೆಟಗೆರಿ-582102 ಇವರಿಗೆ ಸಲ್ಲಿಸುವಂತೆ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!