ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಆಯಾ ತಹಶೀಲ್ದಾರ್ ಗಳು ಜು.18ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ತಾಲೂಕುಗಳಿಗೆ ಜುಲೈ 17ರಂದೇ ಘೋಷಿಸಲಾಗಿತ್ತು. ಆದರೆ, ಶಿವಮೊಗ್ಗ, ಶಿಕಾರಿಪುರ ಮತ್ತು ಭದ್ರಾವತಿ ತಾಲೂಕುಗಳಿಗೆ ಗುರುವಾರ ಬೆಳಗ್ಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವಾಟ್ಸಾಪ್ ಸಂದೇಶದ ಮೂಲಕ ಇಡೀ ಜಿಲ್ಲೆಗೆ ರಜೆ ಇರುವುದಾಗಿ ತಿಳಿಸಿದ್ದಾರೆ.
ಯಾರಿಗೆಲ್ಲ ರಜೆ ನೀಡಲಾಗಿದೆ?
ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.