ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.
READ | ಶಿವಮೊಗ್ಗ ಮಳೆಗೆ ಹಲವೆಡೆ ಭಾರೀ ಹಾನಿ, ಎಲ್ಲೆಲ್ಲಿ ಏನಾಗಿದೆ?