ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ ಲೋಕಾಯುಕ್ತರು ದಾಳಿ (Lokayuktha rais) ನಡೆಸಿ, ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರಕಾಶ್ ಮತ್ತು ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ.
READ | ಶಿವಮೊಗ್ಗದಲ್ಲಿ 358ಕ್ಕೇರಿದ ಡೆಂಗ್ಯೂ ಕೇಸ್
ಕೃಷಿನಗರದಲ್ಲಿರುವ ಪ್ರಕಾಶ್ ಮನೆಯ ಮೇಲೆ ಲೋಕಾಯುಕ್ತ ಎಸ್.ಪಿ ನೇತೃತ್ವದಲ್ಲಿ ದಾಳಿ ಮಾಡಿದ್ದು, ಕೂಲಂಕಷವಾಗಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.
ನಾಗೇಶ್ ಮನೆಯ ಮೇಲೆಯೂ ದಾಳಿ ಮಾಡಿದ್ದು, ಶೋಧ ಕಾರ್ಯ ನಡೆಯುತ್ತಿದೆ.
ರಾಜ್ಯದ ಬೆಂಗಳೂರು, ತುಮಕೂರು, ಯಾದಗಿರಿ, ಶಿವಮೊಗ್ಗ ಸೇರಿದಂತೆ ವಿವಿಧೆಡೆ ಲೋಕಾಯುಕ್ತರು ದಾಳಿ ಮಾಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 12 ಅಧಿಕಾರಿಗಳ ಕಾರ್ಯಾಚರಣೆ ಕೈಗೊಂಡಿದ್ದಾರೆ.