ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಲೆನಾಡಿನ ಜೀವನದಿ ಗಾಜನೂರು ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಶನಿವಾರ ಬಾಗಿನ ಅರ್ಪಿಸಿದರು. ಮಳೆಯ ನಡುವೆಯೂ ಜಲಾಶಯಕ್ಕೆ ಬಾಗಿನ ಅರ್ಪಿಸಲಾಯಿತು.
VIDEO REPORT
ಈ ವೇಳೆ ಮಾತನಾಡಿದ ಅವರು, ಶೀಘ್ರವೇ ಕೇಂದ್ರ ಬಜೆಟ್ ಮಂಡನೆ ಆಗಲಿದ್ದು, ಇದು ಶ್ರೀಸಾಮಾನ್ಯನ ಬಜೆಟ್ ಆಗಿರಲಿದೆ. ಜೊತೆಗೆ ಶಿವಮೊಗ್ಗ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಯೋಜನೆಗಳನ್ನು ಹೊಂದಿದ್ದು, ಅವುಗಳನ್ನು ಕೇಂದ್ರದ ಗಮನಕ್ಕೆ ತರಲಾಗಿದೆ ಎಂದರು.
ಶಾಸಕರಾದ ಆರಗ ಜ್ಞಾನೇಂದ್ರ, ಡಿ.ಎಸ್.ಅರುಣ್ ಸೇರಿದಂತೆ ಇನ್ನಿತರರು ಉಪಸ್ಥಿತಿದ್ದರು.