One click many news | ಇಂಡಿಯನ್ ಮಿಲಿಟರಿ ಕಾಲೇಜಿಗೆ ಪ್ರವೇಶ | ಕಾನೂನು ತರಬೇತಿ ಶಿಷ್ಯವೇತನ | ನೀಲಿಕ್ರಾಂತಿಗೆ ಅರ್ಜಿ

one click many news 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಓದುಗರಿಗೆ ಯಾವ ಸುದ್ದಿಯೂ ಚಿಕ್ಕದಲ್ಲ, ದೊಡ್ಡದಲ್ಲ. ಅರ್ಜಿ ಆಹ್ವಾನದ ವರದಿಯೂ ಕೆಲವೊಮ್ಮೆ ಅಗತ್ಯ ಇರುವವರಿಗೆ ಅವಶ್ಯವಾಗಬಹುದು. ಅದಕ್ಕಾಗಿ ಡಿಜಿಡಲ್ ಮಾಧ್ಯಮ(Digital media)ದಲ್ಲಿ‌ ಇದೊಂದು ವಿಶಿಷ್ಟ ಪ್ರಯತ್ನ. ಜಿಲ್ಲೆಗೆ ಸಂಬಂಧಿಸಿದ ಸಣ್ಣಪುಟ್ಟ ಬೆಳವಣಿಗೆ, ಸರ್ಕಾರದಿಂದ ಕರೆದಿರುವ ಅರ್ಜಿ, ನೀಡಿರುವ ಸೂಚನೆಗಳನ್ನು ಓದುವರಿಗೆ ತಲುಪಿಸಲು ‘One click Many news(OCMN)’ ಕಾಲಂ ಆರಂಭಿಸಲಾಗಿದೆ. ವಿವಿಧ ವಿಚಾರಗಳಿಗೆ ಸಂಬಂಧಿಸಿದ ಸುದ್ದಿಗಳು ಇಲ್ಲಿವೆ.

READ | ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಎಲ್ಲೆಲ್ಲಿ ಭೇಟಿ ನೀಡಲಿದ್ದಾರೆ?

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆ

ಜುಲೈ 2025ನೇ ಸಾಲಿನ ಅಧಿವೇಶನಕ್ಕಾಗಿ ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ (Rashtriya Indian Military College) 8ನೇ ತರಗತಿಗೆ ಪ್ರವೇಶ ಬಯಸುವವರಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ 11.5 ರಿಂದ 13 ವರ್ಷದೊಳಗಿರುವ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಬಾಲಕ /ಬಾಲಕಿಯರಿಗೆ ಅರ್ಹತಾ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1ರಂದು ನಡೆಯುವ ಅರ್ಹತಾ ಪರೀಕ್ಷೆಗೆ ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 30 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-560025 ಇವರಿಗೆ ಸಲ್ಲಿಸುವಂತೆ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.:080-25589459 ಹಾಗೂ ಜಾಲತಾಣ; www.rimc.gov.in  ನ್ನು ಸಂಪರ್ಕಿಸುವುದು.

ಮತ್ಸ್ಯಸಂಪದ, ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ  ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 12 ಹೆಕ್ಟೇರ್‍ಗಳು. ಇದರಲ್ಲಿ ಸಾಮಾನ್ಯ 2, ಮಹಿಳೆ 5, ಪರಿಶಿಷ್ಟ ಜಾತಿ 5 ಮತ್ತು ಪರಿಶಿಷ್ಟ ಪಂಗಡ 1 ಹೆಕ್ಷೇರ್ ಪ್ರದೇಶಕ್ಕೆ ಸೌಲಭ್ಯ ನೀಡುವ ಗುರಿ ನೀಡಲಾಗಿದೆ.
ಮೀನು ಕೃಷಿಕೊಳಗಳ ನಿರ್ಮಾಣ ಮಾಡಿಕೊಂಡು ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯ 10 ಹೆಕ್ಟೇರ್‍ ಗೆ ನೀಡಲಾಗುವುದು. ಇದರಲ್ಲಿ ಸಾಮಾನ್ಯ 5, ಮಹಿಳೆ 3, ಪರಿಶಿಷ್ಟ ಜಾತಿ 1 ಮತ್ತು ಪರಿಶಿಷ್ಡ ಪಂಗಡ 1 ಹೆಕ್ಟೇರ್.  ಮೀನು ಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ ಹೂಡಿಕೆ ವೆಚ್ಚ ಸೇರಿಸಿದಂತೆ ಪ್ರತಿ ಘಟಕ ವೆಚ್ಚ ₹4 ಲಕ್ಷ ನೀಡಲಾಗುವುದು. ಸಾಮಾನ್ಯ 1 ಗುರಿ ನೀಡಲಾಗಿದೆ.
ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್‍ಆರ್‍ಪಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕ‌2 ಸಾಮಾನ್ಯ 1, ಮಹಿಳೆ 1.
ಮೀನು ಮರಿ ಪಾಲನಾ ಘಟಕ ನಿರ್ಮಾಣದ ಸಹಾಯ ಒಟ್ಟು 6.50 ಹೆಕ್ಟೇರ್ ಗುರಿ ಇದ್ದು ಸಾಮಾನ್ಯ 3, ಮಹಿಳೆ 2, ಮತ್ತು ಪರಿಶಿಷ್ಡ ಪಂಗಡ 1.70 ಹೆಕ್ಟೇರ್, ಮೋಟಾರ್ ಸೈಕಲ್ ವಿತ್ ಐಸ್ ಬಾಕ್ಸ್ ಪರಿಶಿಷ್ಟ ಜಾತಿ 2 ಗುರಿ ಹಾಗೂ ಹೊಸದಾದ ಮೀನುಮಾರಾಟ ಕಿಯೋಸ್ಕ್ ನಿರ್ಮಾಣಕ್ಕಾಗಿ ಅಲಂಕಾರಿಕ ಮೀನು ಮಾರಾಟ ಮಳಿಗೆ ಪರಿಶಿಷ್ಟ ಜಾತಿ 1 ಗುರಿ ನೀಡಲಾಗಿದೆ.
ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಡ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 9 ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅರ್ಜಿ ಆಹ್ವಾನ

ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಿಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಥವಾ ಅದೇ ಕುಟುಂಬದ ಸದಸ್ಯರು ಪಿಎಂಆರ್‍ವೈ/ಆರ್‍ಇಜಿಪಿ/ಸಿಎಂಇಜಿಪಿ/ಇತರೆ ಯಾವುದೇ ಸರ್ಕಾರದ ಯೋಜನೆಯಡಿಯಲ್ಲಿ ಸಹಾಯಧನವನ್ನು /ಅಂಚಿನ ಹಣವನ್ನು ಪಡೆದಿರಬಾರದು.
ಆಸಕ್ತರು ಅರ್ಜಿಯನ್ನು ಆನ್‍ಲೈನ್ www.kviconline.gov.in/pmegpeportal ರಲ್ಲಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ. ದೂ.ಸಂ.:08182-222802 ಮತ್ತು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ‘ಬಿ’ ಬ್ಲಾಕ್-7, 2ನೇ ಮಹಡಿ, ಉಪ ವಿಭಾಗಾಧಿಕಾರಿಗಳ ಕಚೇರಿ ಸಂಕೀರ್ಣ, ಬಾಲರಾಜ ಅರಸು ರಸ್ತೆ, ಶಿವಮೊಗ್ಗ. ದೂ.ಸಂ.: 08182-223273 ಗಳನ್ನು ಸಂಪರ್ಕಿಸುವಂತೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾನೂನು ತರಬೇತಿ ಶಿಷ್ಯವೇತನ

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2024-25 ನೇ ಸಾಲಿನಿಂದ ನಾಲ್ಕು ವರ್ಷಗಳ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  
* ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ₹5000 ಗಳನ್ನು ಶಿಷ್ಯವೇತನ ನೀಡಲಾಗುವುದು.
* ಅಭ್ಯರ್ಥಿಯು ಅಡ್ವೊಕೇಟ್ ಆಗಿ ಕಾರ್ಯ ನಿರ್ವಹಿಸಲು ನಿಗದಿಪಡಿಸಿದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷಗಳ ಅವಧಿಯೊಳಗಿದ್ದು, ವಯೋಮಿತಿ 30 ವರ್ಷದೊಳಗಿರಬೇಕು.
* ತಮ್ಮ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ ಕನಿಷ್ಠ 20 ವರ್ಷಗಳ ವೃತ್ತಿ ಅನುಭವವಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು.
* ಕುಟುಂಬದ ವಾರ್ಷಿಕ ಆದಾಯ ₹3.50 ಲಕ್ಷ ಮೀರಿರಬಾರದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖಾ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿದ ಆಗಸ್ಟ್ 13 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೇಡ್, 5ನೇ ಪ್ಯಾರಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ದೂ.ಸಂ: 08182-220206 ನ್ನು ಸಂಪರ್ಕಿಸುವುದು.

one click many news logo

error: Content is protected !!