ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಳೆಗಾಲ ಶುರುವಾಗುತ್ತಿದ್ದಂತೆ ಪಶ್ಚಿಮಘಟ್ಟ (Western ghats) ವ್ಯಾಪ್ತಿಯಲ್ಲಿ ಗುಡ್ಡ ಮತ್ತು ಧರೆ ಕುಸಿತ (Land sliding) ಸಾಮಾನ್ಯವಾಗಿ ಬಿಟ್ಟಿದೆ. ಜುಲೈನಲ್ಲೇ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವೆಡೆ ಭೂಕುಸಿತವಾಗಿದೆ.
READ | ಶಿವಮೊಗ್ಗ ಸೇರಿ ರಾಜ್ಯದ ಎಂಟು ರೈಲುಗಳ ಸಂಚಾರ ಎರಡು ದಿನ ರದ್ದು, ಇಲ್ಲಿದೆ ರೈಲುಗಳ ಪಟ್ಟಿ
ರಾಜ್ಯದ ಪಶ್ಚಿಮಘಟ್ಟಗಳ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಬಹುದಾದ 1,351 ಗ್ರಾಮಗಳನ್ನು ಗುರುತಿಸಲಾಗಿದೆ. ಉಪಶಮನ ಕ್ರಮಕ್ಕಾಗಿ ₹100 ಕೋಟಿ ಮೀಸಲಿಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನ ಪರಿಷತ್ ನಲ್ಲಿ ಕೇಳಲಾದ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಅವರು, 250 ಗ್ರಾಮ ಪಂಚಾಯಿತಿಗಳಲ್ಲಿ ಭೂಕುಸಿತ ಉಂಟಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದರು.
ಅಗತ್ಯಬಿದ್ದರೆ ಇನ್ನಷ್ಟು ಅನುದಾನ ಬಿಡುಗಡೆ
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭೂಕುಸಿತವಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. ಈ ವರ್ಷ ₹100 ಕೋಟಿ ವೆಚ್ಚ ಮಾಡಲು ನಿರ್ಧರಿಸಿದ್ದು, ಬೇಕಿದ್ದರೆ ಇನ್ನಷ್ಟು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಭೂಕುಸಿತಕ್ಕೇನು ಕಾರಣಗಳೇನು?
ಭೂವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಮತ್ತು ರಾಜ್ಯ ಸರ್ಕಾರದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಡೆಸಿದ ಅಧ್ಯಯನದಲ್ಲಿ ಸಾಕಷ್ಟು ಅಂಶಗಳನ್ನು ಪಟ್ಟಿ ಮಾಡಲಾಗಿದೆ.
* ಎರಡು ದಿನದಲ್ಲೇ 50 ಸೆಂ.ಮೀ. ಮಳೆಯಾಗಿರುವುದು.
* ರಸ್ತೆ ಹಾಗೂ ಮೂಲಸೌಕರ್ಯಕ್ಕೆ ನೈಸರ್ಗಿಕ ಇಳಿಜಾರುಗಳ ಮಾರ್ಪಾಡು, ನೈಸರ್ಗಿಕ ನದಿಗಳ ತಡೆ, ಕಾಫಿ ಎಸ್ಟೇಟ್ಗಳಲ್ಲಿ ನಿರ್ಮಿಸಿರುವ ನೀರಿನ ಕೊಳಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಇತರೆ ಸಂಸ್ಥೆಗಳು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿಗಳನ್ನು ನಡೆಸಿರುವುದು.