ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪುಷ್ಯ ಮಳೆಯ ಆರ್ಭಟ ಜೋರಾಗಿದ್ದು, ಜೋರು ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಹಶೀಲ್ದಾರ್ ಆದೇಶಿಸಿದ್ದಾರೆ.
ಹೊಸನಗರದಲ್ಲಿ ಜು.25ರಂದು ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಧರೆ ಕುಸಿತ, ಮರಗಳು ಉರುಳುತ್ತಿವೆ. ರಾತ್ರಿ ಸಹ ಬಿಟ್ಟೂಬಿಡದೆ ಮಳೆ ಸುರಿದಿದೆ. ಹೀಗಾಗಿ, ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಸಾಗರ, ತೀರ್ಥಹಳ್ಳಿ ಶಾಲಾ ಕಾಲೇಜು ರಜೆ
SAGARA, THIRTHAHALLI: ಸಾಗರ ಮತ್ತು ತೀರ್ಥಹಳ್ಳಿಯಲ್ಲೂ ನಿರಂತರ ಮಳೆ ಸುರಿಯುತ್ತಿದ್ದು, ಜು.26ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ತಾಲೂಕಿನ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
READ | ಹೆದ್ದಾರಿಯಲ್ಲಿ ಬಿದ್ದ ಮರ, 4 ಗಂಟೆ ಟ್ರಾಫಿಕ್ ಜಾಮ್, ಮುಂದೇನಾಯ್ತು?