ಗಣಿ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ, ಕಾರಣವೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಭಾನುವಾರ ಬೆಳಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿನ್ನೆ ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದಾಗ ನೀಡಲಾದ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿದರು. ಅಕ್ರಮ ಗಣಿಗಳನ್ನು ಸಕ್ರಮಗೊಳಿಸುವಂತೆ ನಾನು ಹೇಳಿಯೇ ಇಲ್ಲ. ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದಿದ್ದೆ ಎಂದರು.

ಗಣಿಗಾರಿಕೆ ನಡೆಸುತ್ತಿರುವವರು ಪರವಾನಿಗೆಗೆ ಅರ್ಜಿ ಸಲ್ಲಿಸಿದ ಬಳಿಕ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಯಾರಿಗೂ ಅನಾನುಕೂಲ ಆಗದೇ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಮಾತ್ರ ಅನುಮತಿ ನೀಡಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಲಾಗುವುದಿಲ್ಲ.

ಎಫ್.ಡಿ.ಎ.ಪ್ರಶ್ನೆ ಪತ್ರಿಕೆ ಲೀಕ್: ಎಫ್.ಡಿ.ಎ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಮಾಹಿತಿಯನ್ನು ಪಡೆದಿದ್ದೇನೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ಪರೀಕ್ಷಾ ಅಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇದೊಂದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯಬಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಲಾಗುವುದು.
ನಮ್ಮ ಸರ್ಕಾರ ರೈತರ ಪರವಾಗಿದೆ: ಜನವರಿ 26ರಂದು ರೈತರು ಶಾಂತರೀತಿಯಲ್ಲಿ ಪ್ರತಿಭಟಿಸಲು ಅವಕಾಶವಿದೆ. ನಮ್ಮ ಸರ್ಕಾರ ರೈತಪರವಾಗಿದೆ ಎಂದರು.

error: Content is protected !!