ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹುಣಸೋಡು ಕಲ್ಲು ಕ್ರಷರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಪೈಕಿ ಐವರ ಗುರುತು ಪತ್ತೆಯಾಗಿರುವುದಾಗಿ ಪೊಲೀಸ್ ಇಲಾಖೆ ಖಚಿತ ಪಡಿಸಿದೆ.
ಶಿವಮೊಗ್ಗ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯ ಹುಣಸೋಡಿನಲ್ಲಿ ನಡೆದ ಸ್ಫೋಟದಲ್ಲಿ ಇದುವರೆಗೆ ಆರು ಜನರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, 5 ಜನರ ಮೃತ ದೇಹಗಳನ್ನು ಅವರ ಸಂಬಂಧಿಕರು ಗುರುತಿಸಿದ್ದಾರೆ.
ಗುರುವಾರ ರಾತ್ರಿ ಹುಣಸೋಡಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಆರು ಜನರಲ್ಲಿ ಐವರ ಗುರುತು ಪತ್ತೆಯಾಗಿದೆ. ತನಿಖೆ ಮುಂದುವರಿದಿದೆ.
– ಕೆ.ಎಂ.ಶಾಂತರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಘಟನೆಯಲ್ಲಿ ಮೃತಪಟ್ಟವರು | ಆಂಧ್ರ ಪ್ರದೇಶದ ಅನಂತಪುರಂ ಜಿಲ್ಲೆಯ ರಾಯದುರ್ಗ ನಿವಾಸಿಗಳಾದ ಪವನ್ ಕುಮಾರ್ (29), ಜಾವೀದ್ ( 28), ಚೆಲಿಮಾನು ರಾಜು (24), ಭದ್ರಾವತಿಯ ಅಂತರಗಂಗೆ ನಿವಾಸಿ ಪ್ರವೀಣ್ (36), ಅಂತರಗಂಗೆ ತಾಂಡಾದ ಮಂಜುನಾಥ್ (35).
ವಾರಸುದಾರರಿಗೆ ಹಸ್ತಾಂತರ | ಮೃತದೇಹಗಳನ್ನು ಮರಣೋತ್ತರ ಶವಪರೀಕ್ಷೆಯ ನಂತರ ಅವರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಇನ್ನೊಂದು ಮೃತದೇಹದ ಗುರುತು ಪತ್ತೆಯಾಗುವುದು ಬಾಕಿ ಇದ್ದು ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.