ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪ್ರತಿ ತಿಂಗಳ ಮೂರನೇ ಶನಿವಾರ ಆಡಳಿತ ಯಂತ್ರವೇ ಮನೆ ಬಾಗಿಲಿಗೆ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಘೋಷಿಸಿದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಡಳಿತ ಯಂತ್ರವೇ ಜನರ ಮನೆಬಾಗಿಲಿಗೆ ತೆರಳು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಆಯ್ದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಪ್ರಯತ್ನಿಸಲಿದ್ದಾರೆ ಎಂದು ಹೇಳಿದರು.
3 ಸಾವಿರಕ್ಕೂ ಅಧಿಕ ಬೀದಿ ವ್ಯಾಪಾರಿಗಳಿಗೆ ಕಿರು ಸಾಲ | ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಮತ್ತು ಅವರ ಅಭಿವೃAದ್ಧಿಗಾಗಿ ಪಿಎಂ ಸ್ವನಿಧಿ ಯೋಜನೆಯಿಂದ 10 ಸಾವಿರ ರೂಪಾಯಿ ಕಿರು ಸಾಲ ಮಂಜೂರು ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಜನ ಇದರ ಸೌಲಭ್ಯ ಪಡೆದಿದ್ದಾರೆ ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಹಲವರು ಉಪಸ್ಥಿತರಿದ್ದರು.