ಸೇವಾ ನಿವೃತ್ತಿಯ ಅವಧಿ ನಿಗದಿ ಗೊಂದಲ ಬೇಡ, ಸರ್ಕಾರದ ಮುಂದೆ ಅಂತಹ ಪ್ರಸ್ತಾವನೆಯೇ ಇಲ್ಲ: ಸಿ.ಎಸ್.ಷಡಾಕ್ಷರಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ ನೌಕರರಲ್ಲಿ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ನೌಕರರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ । ಬಂಪರ್ ಬಹುಮಾನಕ್ಕೆ ಮುಗಿಬಿದ್ದ 400 ತಂಡ, ತಲೆಕೆಟ್ಟು ಕ್ರಿಕೆಟ್ ಪಂದ್ಯಾವಳಿಯೇ ರದ್ದು!

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂತಹ ಸುಳ್ಳು ಸುದ್ದಿಗಳಿಂದ ನೌಕರರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಇಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲ ಇಲಾಖೆಗಳ ಎಲ್ಲ ಶ್ರೇಣಿಯ ಅಧಿಕಾರಿ, ಸಿಬ್ಬಂದಿ ಹಿತ ಸುಖ ಕಾಯುವ ಹಾಗೂ ಅವರ ಹಕ್ಕು ಬಾಧ್ಯತೆಗಳ ರಕ್ಷಣೆಯಲ್ಲಿ ಸಕ್ರಿಯವಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಯಾವುದೇ ಒಬ್ಬ ನೌಕರನ ಸೌಲಭ್ಯಗಳಿಗೆ ಧಕ್ಕೆ ಉಂಟಾಗುವುದನ್ನು ಒಪ್ಪಿಕೊಳ್ಳುವುದಿಲ್ಲ. ಅಂತಹ ಸಂದರ್ಭ ಎದುರಾದಲ್ಲಿ ಸಂಘವು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!