ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು

 

 

ಸುದ್ದಿ ಕಣಜ.ಕಾಂ
ತೀರ್ಥಹಳ್ಳಿ: ಪಟ್ಟಣ ಸಮೀಪದ ತುಡ್ಕಿ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಯಡಗುಡ್ಡೆ ಗ್ರಾಮದ ನಿವಾಸಿ ಸುಂದರ್ (61) ಎಂಬಾತ ಮೃತ ದುರ್ದೈವಿ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರಿಗೆ ಸಂಸ್ಥೆ ಬಸ್ ಚಾಲಕನನ್ನು ಬಂಧಿಸಲಾಗಿದೆ.

error: Content is protected !!