ಆತ್ಮಹತ್ಯೆಗೆ ಶರಣಾದ ರೈತ

 

 

ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ಮರೂರು ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಎಂ.ಆರ್. ಉಮೇಶ್ ಗೌಡ (60) ಆತ್ಮಹತ್ಯೆಗೆ ಶರಣಾದ ರೈತ. ಸಾಲ ತೀರಿಸಲಾಗದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ಉಮೇಶ್ ಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಕೊನೆ ಉಸಿರು ಎಳೆದಿದ್ದಾರೆ.
ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!