ವಿದ್ಯಾರ್ಥಿಗಳಿಗೆ ಉದ್ಯೋಗ ಮಾರ್ಗದರ್ಶನ ಶಿಬಿರ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಗೋಪಾಳದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೀಡರ್ಸ್ ಲೈನ್ ಇನ್ನೋವೇಷನ್ ಸಂಸ್ಥೆಯಿಂದ ಶನಿವಾರ ಆಯೋಜಿಸಿದ್ದ ಉದ್ಯೋಗ ಮಾರ್ಗದರ್ಶನ ಶಿಬಿರ ಆಯೋಜಿಸಲಾಗಿತ್ತು. ಇಲ್ಲಿ ವಿದ್ಯಾರ್ಥಿದೆಸೆಯಲ್ಲೇ ಸ್ಪರ್ಧಾತ್ಮಕ ಜಗತ್ತಿಗೆ ಹೇಗೆ ಸಿದ್ಧತೆ ನಡೆಸಬೇಕು ಎಂಬ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮತನಾಡಿದ ಕರ್ನಾಟಕ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಎಚ್.ಎಂ.ಚಂದ್ರಶೇಖರಪ್ಪ, ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಪೂರಕವಾದ ಕೌಶಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಲೀಡರ್ಸ್ ನೈಲ್ ಇನ್ನೋವೇಷನ್ ಸಂಸ್ಥೆಯ ಹಾಲೇಶ್ ಶ್ರೀವರ ಮಾತನಾಡಿ, ಸ್ವವಿವರ, ಸಂದರ್ಶನ, ವೃತ್ತಿ ಆಯ್ಕೆ, ಉದ್ಯೋಗ ಕ್ಷೇತ್ರದಲ್ಲಿ ಹಂತ ಹಂತವಾಗಿ ಉನ್ನತ ಸ್ಥಾನಗಳನ್ನು ತಲುಪಲು ಕೈಗೊಳ್ಳಬೇಕಾದ ಸಿದ್ಧತೆ, ಸ್ವಯಂ ಉದ್ಯೋಗ ಹಾಗೂ ಉದ್ಯಮ ಆರಂಭಿಸುವ ಬಗ್ಗೆ ಶೈಕ್ಷಣಿಕ ಹಂತದಿಂದಲೇ ಯೋಜನೆ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
50 ಪುಸ್ತಕಗಳ ಕೊಡುಗೆ | ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಅವರು ಕಾಲೇಜು ಗ್ರಂಥಾಲಯಕ್ಕೆ ಕೌಶಲ್ಯ ಅಭಿವೃದ್ಧಿ ಸಂಬಂಧಿಸಿದ 50 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯೆ ಉಮಾ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಚನ್ನಬಸಪ್ಪ, ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಎಚ್.ಎಂ.ಚಂದ್ರಕುಮಾರ್, ಯೋಗೇಶ್ ಉಪಸ್ಥಿತರಿದ್ದರು.

error: Content is protected !!