‘ದಿಕ್ಕು ತಪ್ಪುತ್ತಿದೆ ಹುಣಸೋಡು ಸ್ಫೋಟ ಪ್ರಕರಣದ ತನಿಖೆ’

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಲೆನಾಡನ್ನೇ ಬೆಚ್ಚಿ ಬೀಳಿಸಿದ್ದ ಹುಣಸೋಡು ಸ್ಫೋಟ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿರುವುದಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಆರೋಪಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಫೋಟ ಪ್ರಕರಣದ ಹಿಂದೆ ಬಿಜೆಪಿ ರಾಜಕಾರಣಿಗಳ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದರು.

ಸಚಿವ ಈಶ್ವರಪ್ಪ ರಾಜೀನಾಮೆ ನೀಡಲಿ | ಈ ಹಿಂದೆ ಸಭೆಯೊಂದರಲ್ಲಿ ಸಚಿವ ಈಶ್ವರಪ್ಪ ಅವರು ಅಧಿಕಾರಿಗಳಿಗೆ ಕಣ್ಮುಚ್ಚಿ ಕುಳಿತುಕೊಳ್ಳುವಂತೆ ಹೇಳಿದ್ದರು. ಇದು ಪತ್ರಿಕೆಗಳಲ್ಲೂ ವರದಿಯಾಗಿದೆ. ಹೀಗಾಗಿ, ತನಿಖೆ ನಿಷ್ಪಕ್ಷಪಾತವಾಗಿ ನಡೆಯುವ ಅನುಮಾನವಿದೆ. ಆದ್ದರಿಂದ ಸಚಿವ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಹಾಗೂ ಪ್ರಕರಣ ಸಂಬಂಧ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಅಚ್ಛೇ ದಿನ್ ಅಲ್ಲ ಕೊಚ್ಚೆ ದಿನ್ | ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಅಚ್ಛೇ ದಿನ್ ಬರುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ, ಕೊಚ್ಚೆ ದಿನ ನೋಡಬೇಕಾದ ಸ್ಥಿತಿ ಬಂದಿದೆ ಎಂದು ಆಪಾದಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಪ್ರಮುಖರಾದ ಕವಿತಾ, ವಿಜಯಲಕ್ಷ್ಮಿ ಪಾಟೀಲ್, ಸೌಂಗಧಿಕ, ಫರಿದಾಖಾನಂ, ಗೌಸಿಯಾ ವಾಜಿಯ, ರೇಷ್ಮಾ, ಸುವರ್ಣ ನಾಗರಾಜ್, ಸೆಲ್ವ ಮಾರ್ಟಿನ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!