ಕೆ ಸೆಟ್ ಪರೀಕ್ಷೆಗೆ ಮುಹೂರ್ತ ಫಿಕ್ಸ್, ಯಾವಾಗ ನಡೆಯಲಿದೆ ಪರೀಕ್ಷೆ ಇಲ್ಲಿದೆ ಮಾಹಿತಿ

 

 

ಸುದ್ದಿ ಕಣಜ.ಕಾಂ
ಮೈಸೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ ಸೆಟ್)ಗೆ ಮುಹೂರ್ತ ಫಿಕ್ಸ್ ಆಗಿದೆ. ಮೈಸೂರು ವಿಶ್ವವಿದ್ಯಾಲಯವು ಈ ಸಂಬಂಧ ಕೆ ಸೆಟ್ ಪರೀಕ್ಷೆ ಕುರಿತು ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ । ಯುಪಿಎಸ್‍ಸಿ ಪರೀಕ್ಷೆ ಬರೆಯಲು ಮತ್ತೊಂದು ಚಾನ್ಸ್

ಎಲ್ಲೆಲ್ಲಿ ನಡೆಯಲಿದೆ ಪರೀಕ್ಷೆ | ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ತಮಕೂರು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಶುಲ್ಕ | ಸಾಮಾನ್ಯ ವರ್ಗದವರಿಗೆ 1,150 ರೂಪಾಯಿ, ಪ್ರವರ್ಗ 2ಎ, 2ಬಿ, 3ಎ, 3ಬಿಯವರಿಗೆ 950 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಪಿಡಬ್ಲ್ಯುಡಿ ವರ್ಗದವರಿಗೆ 650 ರೂ. ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕ | ಫೆಬ್ರವರಿ 8ರಿಂದ ಅರ್ಜಿ ಸಲ್ಲಿಕೆ ಆರಂಭ, ಮಾರ್ಚ್ 7ರಂದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ, ಮಾರ್ಚ್ 13 ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ (250 ರೂಪಾಯಿ), ಮಾರ್ಚ್ 15 ಭರ್ತಿ ಮಾಡಿ ಮುದ್ರಿಸಿದ ಅರ್ಜಿಯೊಂದಿಗೆ ಹಾಜರಾತಿ ಪತ್ರವನ್ನು ಆಯ್ಕೆ ಮಾಡಿದ ನೋಡೆಲ್ ಕೇಂದ್ರಕ್ಕೆ ಸಲ್ಲಿಸಲು ಕೊನೆ ದಿನ ಹಾಗೂ ಏಪ್ರಿಲ್ 11ರಂದು ಪರೀಕ್ಷೆ ನಡೆಯಲಿವೆ.
ಅಧಿಸೂಚನೆಗಾಗಿ ಲಿಂಕ್ ಮೇಲೆ ಕ್ಲಿಕ್ ಮಾಡಿ | Notification

error: Content is protected !!