ಸುದ್ದಿ ಕಣಜ.ಕಾಂ
ಶಿವಮೊಗ್ಗ: ಅಡಕೆಗೆ ಬಗ್ಗೆ ಸಂಶೋಧನೆ ವರದಿ ಬರುವವರೆಗೆ ಸುಪ್ರೀಂ ಕೋರ್ಟ್ನಲ್ಲಿರುವ ಪ್ರಕರಣ ಇತ್ಯರ್ಥಗೊಳಿಸಬಾರದು ಎಂದು ಕೇಂದ್ರ ಸರ್ಕಾರದ ಮೂಲಕ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಅಡಕೆ ಕಾರ್ಯಪಡೆ ಸಭೆಯಲ್ಲಿ ಮಂಗಳವಾರ ನಿರ್ಣಯಿಸಲಾಯಿತು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಅಡಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ, ಅಡಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬುವುದನ್ನು ಸಂಶೋಧನೆಗಳಿಂದ ನಿರೂಪಿಸಲು ಕಾಲಾವಕಾಶಬೇಕು. ಆದ್ದರಿಂದ, ಕೇಂದ್ರ ಸರ್ಕಾರದ ಮೂಲಕ ಸುಪ್ರೀಂ ಕೋರ್ಟ್ಗೆ ಸಂಶೋಧನೆ ನಡೆಯುತ್ತಿರುವ ಬಗ್ಗೆ ಅಫಿಡವಿಟ್ ಸಲ್ಲಿಸಲು ಒತ್ತಡ ಹೇರುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ರಾಮಯ್ಯ ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ಅಡಕೆ ಬಗ್ಗೆ ಸಂಶೋಧನೆ ನಡೆಯುತ್ತಿದೆ. ಆದ್ದರಿಂದ, ಸುಪ್ರೀಂ ಕೋರ್ಟ್ನಲ್ಲಿರುವ ಪ್ರಕರಣವನ್ನು ಮುಂದಕ್ಕೆ ಹಾಕುವಂತೆ ಕ್ರಮ ಕೈಗೊಳ್ಳಲು ನಿರ್ಣಯ ತೆಗೆದುಕೊಳ್ಳಲಾಗಿದೆ.
ಅಡಕೆ ಆರೋಗ್ಯಕ್ಕೆ ಪೂರಕ ಹಾಗೂ ಔಷಧೀಯ ಗುಣಗಳನ್ನು ಹೊಂದಿರುವ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಾದವನ್ನು ಸಮರ್ಥವಾಗಿ ಮಂಡಿಸುವಂತೆ ವಕೀಲರಿಗೆ ಕೋರಲಾಗುವುದು.
ಶಾಸಕ ಹರತಾಳು ಹಾಲಪ್ಪ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಉಪಸ್ಥಿತರಿದ್ದರು.