ಶಿವಮೊಗ್ಗದಲ್ಲಿ ಚಟ್ಟವೇರಿದ ಬೈಕ್!

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ತೈಲ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎನ್.ಎಸ್.ಯು.ಐ ಕಾರ್ಯಕರ್ತರು ಶನಿವಾರ ವಿನೂತನವಾಗಿ ಪ್ರತಿಭಟನೆ ಮಾಡಿದರು.
ನಗರದ ಮಹಾವೀರ ವೃತ್ತದಲ್ಲಿ ಬೈಕ್ ಅನ್ನು ಚಟ್ಟಕ್ಕೆ ಕಟ್ಟಿ ಅಣಕು ಪ್ರದರ್ಶನ ಮಾಡಿದರು.
ಕೇಂದ್ರ ಸರ್ಕಾರ ನಿತ್ಯ ಬಳಕೆ ವಸ್ತುಗಳ ಬೆಲೆ ನಿರಂತರ ಏರಿಕೆ ಕಾಣುತ್ತಿದ್ದ ಜನಸಾಮಾನ್ಯ ಬದುಕುವುದೇ ಕಷ್ಟವಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ ತೆರಿಗೆ ಹೇರುತ್ತಲೇ ಇದೆ. ಜನರ ನೋವುಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾಧ್ಯಕ್ಷ ಎಚ್.ಎಸ್.ಬಾಲಾಜಿ, ಯುವ ಮುಖಂಡ ಸಿ.ಜಿ.ಮಧುಸೂದನ್, ಮಹಮ್ಮದ್ ನಿಹಾಲ್, ಎನ್.ಎಸ್.ಯು.ಐ ಕಾರ್ಯಾಧ್ಯಕ್ಷ ರವಿಕುಮಾರ್, ವಿಜಯ್, ವಿನಯ್ ತಾಂಡ್ಲೆ ಉಪಸ್ಥಿತರಿದ್ದರು.

error: Content is protected !!