ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 420 ಗ್ರಾಂ ಮಾದಕ ವಸ್ತು ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ । ರೈತಪರ ಬಜೆಟ್ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ
ಶಕ್ತಿಧಾಮ 2 ಲೇಔಟ್ ನ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿವೈಎಸ್.ಪಿ ಉಮೇಶ್ ಈಶ್ವರ್ ನಾಯಕ್, ಶಿವಮೊಗ್ಗ ಗ್ರಾಮಾಂತರ ಸಿಪಿಐ ಸಂಜೀವ್ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್.ಐ ಮಂಜುನಾಥ್ ನೇತೃತ್ವದಲ್ಲಿ ಸಿಬ್ಬಂದಿ ಯಶವಂತ್ ಕುಮಾರ್, ಮಂಜುನಾಥ್, ಧನ್ಯಾ ನಾಯ್ಕ, ಕಲ್ಮೇಶ್ ತಂಡವು ಕಾರ್ಯಾಚರಣೆ ನಡೆಸಿದರು.
420 ಗ್ರಾಂ ಗಾಂಜಾ | ಒಟ್ಟು 420 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ. 800 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.