ಶಿವಮೊಗ್ಗ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡವರ ಬೇಡಿಕೆಗಳೇನು ಗೊತ್ತಾ? ಸಿಎಂಗೆ ಮನವಿ ಸಲ್ಲಿಕೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಲಾಗಿದೆ. ಆದರೆ, 13 ವರ್ಷಗಳೇ ಕಳೆದರೂ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಶೀಘ್ರವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಸಂತ್ರಸ್ತರು ಒತ್ತಾಯಿಸಿದ್ದಾರೆ.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಈ ಬಗ್ಗೆ ಪರಿಶೀಲಿಸಿ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದರು.
ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಆರ್.ವಿಜಯಕುಮಾರ್, ಸೋಗಾನೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನಿಲ್, ಸದಸ್ಯರಾದ ಹೇಮೇಶ್ ನಾಯ್ಕ್, ಸುಮಿತ್ರಮ್ಮ, ಮುಖಂಡರಾದ ಅರುಣ್ ನಾಯ್ಡು, ಹೇಮಂತ್, ನಾಗರಾಜ್ ಉಪಸ್ಥಿತರಿದ್ದರು.

error: Content is protected !!