ಎರಡು ದಿನ ನೀರು ಬರಲ್ಲ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗಾಜನೂರು ವಿದ್ಯುತ್ ಸರಬರಾಜಾಗುವ ವಿದ್ಯುತ್ ವಿತರಣೆ ಕೇಂದ್ರದ ದುರಸ್ತಿ ಮತ್ತು ನಿರ್ವಹಣೆ ಇರುವುದರಿಂದ ಗಾಜನೂರು ಮೂಲಸ್ಥಾವರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡಲಾಗುವುದು. ಆದ್ದರಿಂದ, ಫೆಬ್ರವರಿ 23 ಮತ್ತು 24ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದು. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

error: Content is protected !!