ಪ್ರವಾಸಿ ಕಾರಿನ ಚಾಲಕರ ಸಂಘದಿಂದ ಪ್ರತಿಭಟನೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ತೈಲ ಬೆಲೆಯನ್ನು ಇಳಿಕೆ ಮಾಡುವಂತೆ ಒತ್ತಾಯಿಸಿ ಪ್ರವಾಸಿ ಕಾರಿನ ಚಾಲಕರ ಸಂಘವು ಶುಕ್ರವಾರ ಪ್ರತಿಭಟನೆ ನಡೆಸಿತು.
ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರಿಕೆಯಿಂದ ಟ್ಯಾಕ್ಸಿ, ಬಸ್, ಲಾರಿ, ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರು ಕಷ್ಟಪಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಂಘದ ಅಧ್ಯಕ್ಷ ಬಿ.ಡಿ.ಗಣೇಶ್, ಕಾರ್ಯದರ್ಶಿ ಎನ್.ರಾಜು, ಖಜಾಂಚಿ ಸುಹಾಸ್ ಶೆಟ್ಟಿ, ಸಹ ಕಾರ್ಯದರ್ಶಿ ರಂಗನಾಥ್ ಭಾಗವಹಿಸಿದ್ದರು.

error: Content is protected !!