ಯಾರೇನೇ ಟೀಕಿಸಲಿ ಐ ಡೋಂಟ್ ಕೇರ್: ಬಿ.ಎಸ್.ಯಡಿಯೂರಪ್ಪ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪ್ರತಿಪಕ್ಷಗಳ ಆರೋಪಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಗರದ ಹಳೆಯ ಜೈಲು ಆವರಣದಲ್ಲಿ ಬಿ.ಎಸ್.ಯಡಿಯೂರಪ್ಪ ಅಭಿನಂದನಾ ಸಮಿತಿಯು ಭಾನುವಾರ ಸಂಜೆ ಆಯೋಜಿಸಿದ್ದ ಬಿ.ಎಸ್.ವೈ ಅವರಿಗೆ ನಮ್ಮೊಲುಮೆ ಅಭಿಮಾನದ ಅಭಿನಂದನೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ । ಜನ್ಮದಿನ ಕಾರ್ಯಕ್ರಮದಲ್ಲಿ ಭಾವುಕರಾದ ಸಿಎಂ ಯಡಿಯೂರಪ್ಪ

ಯಾರು ಏನು ಬೇಕಾದರೂ ಟೀಕಿಸಲಿ, ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ತಲೆ ತಗ್ಗಿಸುವ ಕೆಲಸವನ್ನು ನಾನು ಮಾಡಿಲ್ಲ. ಅವರ ಟೀಕೆಗಳಿಗೆ ನಾನು ತಲೆ ಬಾಗುವುದಿಲ್ಲ ಎಂದು ತೀಕ್ಷ್ಣವಾಗಿ ತಿಳಿಸಿದ್ದಾರೆ.

ಸಮಾರಂಭವನ್ನು ಬಿಜೆಪಿ ವರಿಷ್ಠ ಡಿ.ಎಚ್.ಶಂಕರಮೂರ್ತಿ ಉದ್ಘಾಟಿಸಿದರು. ಸಚಿವರಾದ ಕೆ.ಎಸ್.ಈಶ್ವರಪ್ಪ, ಭೈರತಿ ಬಸವರಾಜ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ರುದ್ರೇಗೌಡ, ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಅಶೋಕ್ ನಾಯ್ಕ್, ಆಯನೂರು ಮಂಜುನಾಥ್, ಸುಕುಮಾರ ಶೆಟ್ರು, ಭಾರತಿ ಶೆಟ್ಟಿ, ಆರ್.ಎಸ್.ಎಸ್. ಪ್ರಮುಖ ಪಟ್ಟಾಭಿರಾಮ್, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಟ ಜಗ್ಗೇಶ್, ಕೋಮಲ್,ಶ್ರುತಿ, ತಾರಾ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಸೂಡ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಕೆ.ಕಲ್ಯಾಣ್, ಡಿ.ಎಸ್.ಅರುಣ್, ಮೇಯರ್ ಸುವರ್ಣ ಶಂಕರ್ ಇತರರಿದ್ದರು. ಅನುಶ್ರೀ ನಿರೂಪಿಸಿದರು.

 

error: Content is protected !!