ಉಪ ಚುನಾವಣೆ ಅಭ್ಯರ್ಥಿ ಘೋಷಣೆಯ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ?

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಮುಂಬರುವ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಮತ್ತು ವಿಧಾನಸಭೆ ಉಪ ಚುನಾವಣೆಯ ಅಭ್ಯರ್ಥಿಗಳ ಘೋಷಣೆಯ ಬಗ್ಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಉಪ ಚುನಾವಣೆಗೆ ಎಲ್ಲ ಸಿದ್ಧತೆ ಮಾಡಲಾಗಿದೆ. ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡಿದ್ದಾರೆ. ನಾನೂ ಹಾಕಿಸಿಕೊಳ್ಳುವೆ. 60 ವರ್ಷ ಮೇಲ್ಪಟ್ಟವರು ಹಾಗೂ 49 ವರ್ಷ ಮೇಲ್ಪಟ್ಟ ಆರೋಗ್ಯ ತೊಂದರೆ ಇರುವವರು ಲಸಿಕೆ ಹಾಕಿಸಿಕೊಳ್ಳಲು‌ ಕೋರಿಕೆ.
ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗೂ ಮಸ್ಕಿ, ಬಸವ ಕಲ್ಯಾಣ, ಸಿಂದಗಿ ವಿಧಾನ ಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಈಗಾಗಲೇ ಉಪ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಗೆಲ್ಲುವ ನಿರೀಕ್ಷೆ ಇದೆ | ಒಂದು ಲೋಕಸಭೆ ಮತ್ತು ಮೂರು ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆ ಇದೆ ಎಂದರು.

error: Content is protected !!