ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜೆಡಿಎಸ್ ಮುಖಂಡ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ತಮ್ಮ ಜನ್ಮ ದಿನವಾದ ಮಂಗಳವಾರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ್ದಾರೆ.
ಕಲ್ಲಹಳ್ಳಿ ಗ್ರಾಮದ ತಮ್ಮ ಮನೆಯಲ್ಲಿ ಜನ್ಮದಿನಾಚರಣೆ ಆಚರಿಸಿಕೊಂಡಿರುವ ಅವರು ಮಾಧ್ಯಮದೊಂದಿಗೆ ಮಾತನಾಡಿದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ. ಜೆಡಿಎಸ್ ತೊರೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲು ಕಷ್ಟವಾಗುತ್ತಿದೆ.
– ಮಧು ಬಂಗಾರಪ್ಪ, ಮಾಜಿ ಶಾಸಕ
ಜಿಪಂ ಚುನಾವಣೆಯೊಳಗೆ ನಿರ್ಧಾರ ಪ್ರಕಟ | ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಹಿತೈಷಿಗಳು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಲಾಗುವುದು. ಜಿಲ್ಲಾ ಪಂಚಾಯಿತಿ ಚುನಾವಣೆಯ ಒಳಗೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.