ಕುವೆಂಪು ವಿವಿ ಪರೀಕ್ಷಾ ಶುಲ್ಕ ಹೊರೆಯ ಬಗ್ಗೆ ಸಂಸದರು ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷೆ ಶುಲ್ಕ ನಿಗದಿ ಮಾಡುವ ಬಗ್ಗೆ ಕುಲಪತಿಗಳ ಜತೆ ಚರ್ಚಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು.
ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊರೆಯಾಗುವಂತೆ ಶುಲ್ಕ ನಿಗದಿ ಮಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಕೋವಿಡ್ ಸಂಕಷ್ಟ ಸ್ಥಿತಿಯಲ್ಲಿ ಈ ರೀತಿಯಲ್ಲಿ ಆರ್ಥಿಕ ಹೊರೆ ಹೇರುವುದು ಸರಿಯಲ್ಲ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ ಎಂದು ತಿಳಿಸಿದರು.
ಪೋಷಕರು ಕಷ್ಟದಲ್ಲಿರುವಾಗ ಈ ರೀತಿಯ ಹೊರೆ ಸರಿಯಲ್ಲ. ಕಾನೂನುಗಳಿದ್ದರೂ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶುಲ್ಕ ಕಡಿಮೆ ಮಾಡುವ ಬಗ್ಗೆ ಕುಲಪತಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

error: Content is protected !!