ಕೋವಿಡ್ ವ್ಯಾಕ್ಸಿನ್ | ಮಹಿಳಾ ದಿನ ಪ್ರಯುಕ್ತ ಪಿಂಕ್ ಬೂತ್ ಸ್ಥಾಪನೆ, ಜಿಲ್ಲೆಯಲ್ಲಿ ಎಷ್ಟಿವೆ ವ್ಯಾಕ್ಸಿನ್ ಸೆಂಟರ್, ಕಾಯಿಲೆ ದೃಢೀಕರಣ ಪತ್ರ ಅಗತ್ಯವೆ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 8ರಿಂದ 41 ಸರ್ಕಾರಿ ಹಾಗೂ 8 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
60 ವರ್ಷ ಮೇಲ್ಪಟ್ಟ ಹಾಗೂ 45-59 ವರ್ಷದ ಆರೋಗ್ಯ ತೊಂದರೆ ಇರುವವರು ತಮ್ಮ ಹತ್ತಿರದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆಯಬಹುದು.
ಕಾಯಿಲೆ ದೃಢೀಕರಣ ಪತ್ರ ಕಡ್ಡಾಯ | 45-59 ವರ್ಷದವರು ತಮಗೆ ಇರುವ ಕಾಯಿಲೆ ಬಗ್ಗೆ ವೈದ್ಯರಿಂದ ಧೃಡೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕು.

ಕೋವಿಡ್ ಲಸಿಕೆಯು ಅತ್ಯಂತ ಸುರಕ್ಷಿತವಾಗಿದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡೆದೇ ಸರ್ಕಾರ ನೀಡಿರುವ ಸೌಲಭ್ಯದ ಸದುಪಯೋಗ ಪಡೆಯಬೇಕು.
– ಕೆ.ಬಿ.ಶಿವಕುಮಾರ್, ಡಿಸಿ, ಶಿವಮೊಗ್ಗ

ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಸಹ ಈ ಕೋವಿಡ್ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಲ್ಲ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಅಥವಾ ಇತರೆ ಯಾವುದೇ ಗುರುತಿನ ಚೀಟಿ ಮತ್ತು ಮೊಬೈಲ್ ತರಬೇಕು ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುತ್ತದೆ.

ಇದನ್ನೂ ಓದಿ | ಕುವೆಂಪು ವಿವಿ ಪರೀಕ್ಷಾ ಶುಲ್ಕ ಹೊರೆಯ ಬಗ್ಗೆ ಸಂಸದರು ಹೇಳಿದ್ದೇನು?

ಅದೇ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ ಗೆ 250 ರೂಪಾಯಿ ಪಾವತಿಸಬೇಕಾಗುತ್ತದೆ. ಶಿವಮೊಗ್ಗ ಜಿಲ್ಲೆಯ 49 ಕೋವಿಡ್ ಲಸಿಕಾ ಕೇಂದ್ರಗಳು ಆನ್ ಲೈನ್ ನಲ್ಲಿ ಪ್ರಚಾರಪಡಿಸಿದ್ದು ಕೋ ವ್ಯಾಕ್ಸಿನ್ ಆಪ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ದಾಖಲಿಸಿಕೊಂಡು ಇಲ್ಲವೇ ಸಮೀಪದ ಆಸ್ಪತ್ರೆಗೆ ತೆರಳಿ ಆನ್ ಸ್ಪಾಟ್ ದಾಖಲಾತಿ ಮಾಡಿಕೊಂಡು ಲಸಿಕೆ ಪಡೆಯಬಹುದು.

ಪಿಂಕ್ ಬೂತ್ | ಮಾರ್ಚ್ 8 ರಂದು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ತುಂಗಾನಗರ ಪ್ರಸೂತಿ ಕೇಂದ್ರದಲ್ಲಿ ಮಹಿಳಾ ಫಲಾನುಭವಿಗಳಿಗೆ ಲಸಿಕೆ ನೀಡಲು ಗುಲಾಬಿ ಬೂತ್ (ಪಿಂಕ್ ಬೂತ್) ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.

error: Content is protected !!