ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಹೊಳಲೂರು 1 ಹೋಬಳಿಯ ಆಲದಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾರ್ಚ್ 20ರಂದು ವಾಸ್ತವ್ಯ ಹೂಡಲಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆ ಅಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಯಾವ ಹಳ್ಳಿ | ಮಾರ್ಚ್ 20ರಂದು ಬೆಳಗ್ಗೆ 11 ಗಂಟೆಗೆ ಆಲದಹಳ್ಳಿ ಗ್ರಾಮದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ | ಸಾಗುವಾನಿ ಕಡಿತಲೆ ಮಾಡಿದ್ದ ಆರೋಪಿಗೆ ಜೈಲು ಶಿಕ್ಷೆ
ಆದ್ದರಿಂದ ಆಲದಹಳ್ಳಿಯ ಗ್ರಾಮಸ್ಥರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ಮಾರ್ಚ್ 20 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.