ಮೂವರು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಹೇಗೆ ನಡೆಯಿತು ಘಟನೆ?

 

 

ಸುದ್ದಿ ಕಣಜ.ಕಾಂ
ಹೊಸನಗರ: ತಾಲೂಕಿನ ರಿಪ್ಪನಪೇಟೆ ಸಮೀಪ ಮೂವರು ಕಾಲೇಜು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಇದರಿಂದ ಮೂವರು ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?

ಹಿರೇಮೈಥೆ ಗ್ರಾಮದ ನರೇಂದ್ರ, ಸುರೇಶ್ ಮತ್ತು ಲಕ್ಷ್ಮಣ್ ಎಂಬುವವರ ಮೇಲೆ ಹೆಜ್ಜೇನು ದಾಳಿ ಮಾಡಿದೆ.
ಹೇಗೆ ನಡೆಯಿತು | ನರೇಂದ್ರ ಎಂಬಾತ ಕಾಲೇಜಿಗೆ ಸೈಕಲ್ ಮೇಲೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ ಮಾಡಿದೆ. ಸಹಾಯಕ್ಕೆ ಧಾವಿಸಿದ ಇನ್ನಿಬ್ಬರು ವಿದ್ಯಾರ್ಥಿಗಳನ್ನೂ ಹುಳುಗಳು ಕಚ್ಚಿವೆ ಎಂದು ತಿಳಿದುಬಂದಿದೆ.
ಜೇನು ದಾಳಿಗೆ ಒಳಗಾದ ವಿದ್ಯಾರ್ಥಿಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!