ಕೈ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ ಪೊಲೀಸ್ ಠಾಣೆ ಮೇಲೆ ಮುತ್ತಿಗೆ, ಸಿದ್ದರಾಮಯ್ಯ ಖಡಕ್ ವಾರ್ನಿಂಗ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ ರಾಜ್ಯದ ಪ್ರತಿ ವಿಧಾನಸಭೆಯಲ್ಲಿರುವ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದಾಗಿ ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು.

ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!

ನಗರದ ಸೈನ್ಸ್ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಶನಿವಾರ ಆಯೋಜಿಸಿದ್ದ ಜನಾಕ್ರೋಶ ಸಭೆಯಲ್ಲಿ ಮಾತನಡಿದರು.
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಮತ್ತು ಪಕ್ಷದ ಕಾರ್ಯಕರ್ತರ ಮೇಲೆ ನಡೆದ ದೌರ್ಜನ್ಯ, ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ | ಒಂದು ಸೈಕಲ್, ಎರಡು ಸೀರೆ, ಸಿಡಿ ಇದು ಬಿಜೆಪಿ ಸಾಧನೆ: ಡಿಕೆಶಿ ವ್ಯಂಗ್ಯ

ಒಂದುವೇಳೆ ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡಲಾರಂಭಿಸಿದರೆ ಯಾರಲ್ಲೂ ನಮ್ಮನ್ನು ತಡೆಯುವ ಶಕ್ತಿ ಇಲ್ಲ. ಈ ಸಮಾವೇಶದ ಉದ್ದೇಶ ಸಂಗಮೇಶ್ವರ್ ಅವರನ್ನು ರಕ್ಷಿಸುವುದಲ್ಲ. ಘಟನೆ ಸಂಬಂಧ ಇಲ್ಲಿನ ಎಸ್.ಪಿ ಅವರೊಂದಿಗೆ ಮಾತನಾಡಿದ್ದೆ. ಯಾರನ್ನೂ ಬಂಧಿಸದಂತೆಯೂ ತಿಳಿಸಿದ್ದೆ. ಆದರೂ ಶಾಸಕರ ಪುತ್ರನನ್ನು ಬಂಧಿಸಲಾಗಿದೆ. ಆದರೆ, ಪ್ರತಿದೂರಿನ ಆರೋಪಿಗಳನ್ನು ಏಕೆ ಬಂಧಿಸಿಲ್ಲ. ಇದು ಪಕ್ಷಪಾತ ಅಲ್ಲವೇ ಎಂದು ಪ್ರಶ್ನಿಸಿದರು.

ಹಣ ಗಳಿಕೆಯಲ್ಲಿ ಪೈಟೋಟಿ | ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಬಿ.ಎಸ್. ಯಡಿಯೂರಪ್ಪ ಲೂಟಿ ಮಾಡಿದ್ದು ಬಿಟ್ಟರೆ ಇನ್ನೇನೂ ಮಾಡಿಲ್ಲ. ಸಚಿವ ಈಶ್ವರಪ್ಪ ಹಾಗೂ ಸಿಎಂ ಯಡಿಯೂರಪ್ಪ ಅವರ ನಡುವೆ ಹಣ ಮಾಡುವುದಕ್ಕಾಗಿ ಪೈಪೋಟಿ ಇದೆ ಎಂದು ವ್ಯಂಗ್ಯವಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವ ನರಾಯಣ್, ಪ್ರಮುಖರಾದ ಕೃಷ್ಣ ಬೈರೇಗೌಡ, ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕಿಮ್ಮನೆ ರತ್ನಾಕರ್, ಬಿ.ಕೆ.ಸಂಗಮೇಶ್ವರ್, ಕೆ.ಬಿ.ಪ್ರಸನ್ನಕುಮಾರ್, ಆರ್.ಪ್ರಸನ್ನಕುಮರ್ ಸೇರಿದಂತೆ ಪಕ್ಷದ ಕಾರ್ಯಕರ್ತರು, ಮುಖಂಡರು, ಪ್ರಮುಖರು ಪಾಲ್ಗೊಂಡಿದ್ದರು.

error: Content is protected !!