ಅಶ್ಲೀಲ ಸಿಡಿ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದ್ದೇನು? ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಾಯ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಾಸಕ ರಮೇಶ್ ಜಾರಕಿಹೊಳಿ ಮತ್ತು ಯುವತಿಯೊಬ್ಬರ ನಡುವಿನ ಖಾಸಗಿ ಕ್ಷಣಗಳು ಒಳಗೊಂಡಿರುವ ಸಿಡಿ ಪ್ರಕರಣದ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಮುನ್ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

VIDEO REPORT 

ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!

ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ವಿಚಾರವಾಗಿ ಬಸನಗೌಡ ಯತ್ನಾಳ್, ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಅವೆಲ್ಲವನ್ನು ಪರಿಗಣಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು. ಇಲ್ಲದಿದ್ದರೆ, ನಾವೇ ದೂರು ಕೊಡಿಸುತ್ತೇವೆ ಎಂದು ಹೇಳಿದರು.
ಜನಾಕ್ರೋಶ ಪ್ರತಿಭಟನೆಗೆ ಉತ್ತಮ ಸ್ಪಂದನೆ | ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಜನಾಕ್ರೋಶ ಪ್ರತಿಭಟನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸ್ಥಳೀಯ ಕಾರ್ಯಕರ್ತರು ಉತ್ತಮ ಸಹಕಾರ ನೀಡಿದ್ದಾರೆ. 45 ಶಾಸಕರು ಬಂದಿದ್ದರು. ಬಿಜೆಪಿಯ ಭದ್ರಕೋಟೆಯಲ್ಲಿ ಜನಾಕ್ರೋಶಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ ಎಂದರು.

error: Content is protected !!