ಸುದ್ದಿ ಕಣಜ.ಕಾಂ
ಬೆಂಗಳೂರು: ಕಳೆದ 14 ದಿನಗಳಿಂದ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಹೊಸ ಕಂಟಕ ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅದರ ಹೈಲೈಟ್ಸ್ ಇಲ್ಲಿವೆ.
- ಕಳೆದ ದಿನಗಳಲ್ಲಿ ಪಾಸಿಟಿವ್ ರೇಟ್ ಹೆಚ್ಚು, ಮರಣ ಕಡಿಮೆ
- ಬೀದರ್,ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚು
- ಕೋವಿಡ್ 19ರ ಎರಡನೇ ಅಲೆಯ ಮುನ್ಸೂಚನೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಝಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರ ಸಂಖ್ಯೆಯನ್ನು ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಸೂಚನೆ
- ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ನೈರ್ಮಲ್ಯ ಕಾಯ್ದುಕೊಳ್ಳುವುದು ಕಡ್ಡಾಯ, ಉಲ್ಲಂಘನೆಗೆ ಕಟ್ಟುನಿಟ್ಟಿನ ದಂಡ
- ಪರೀಕ್ಷೆ ಪ್ರಮಾಣದಲ್ಲಿ ಏರಿಕೆ
- ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸುವುದು.
- ಕೋವಿಡ್ ಆಸ್ಪತ್ರೆಗಳು, ಆಕ್ಸಿಜನ್ ಪೂರೈಕೆ ಇರುವ ಹಾಸಿಗೆಗಳು, ಐಸಿಯು ಲಭ್ಯತೆ ಹಾಗೂ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಅಗತ್ಯ ಸಿದ್ಧತೆ
- ಹಿರಿಯ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯ ಚುರುಕು, ವಿಶೇಷವಾಗಿ ಗ್ರಾಮೀಣ ಪ್ರದೇಶ, ಕೊಳೆಗೇರಿಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಳ
- ಸಾರ್ವಜನಿಕ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಅಧಿಕ ಜನ ಪ್ರಯಾಣಿಸುವುದಕ್ಕೆ ಬ್ರೇಕ್
- ಮುನ್ನೆಚ್ಚರಿಕ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚೆಚ್ಚು ಜಾಗೃತಿ ಮೂಡಿಸುವುದು.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!